ಗಂಗಾವತಿ: ಮಾರ್ಚ್-11 ರಂದು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ 134ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಹಿಂದಿನ ದಿನ ಅಂದರೆ ಮಾರ್ಚ್-10 ರಂದು 134ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿತು. ಮಾರ್ಚ್-11 ಫಾಲ್ಗುಣ ಬಹುಳ ಅಷ್ಠಮಿ ಬುಧವಾರ ಬೆಳಗಿನ ಜಾವ 5:30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, 11:30 ರಿಂದ 12:30 ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ 11 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಜರುಗಿತು.
ಈ ಉತ್ಸವದ ಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹೆಬ್ಬಾಳ ನಾಗಭೂಷಣ ಶಿವಾಚಾರ್ಯರು, ಕಂಪ್ಲಿ ಕಲ್ಮಠದ ಶ್ರೀ ಮ.ನಿ.ಪ್ರ ಅಭಿನವ ಪ್ರಭು ಮಹಾಸ್ವಾಮಿಗಳು, ಶಾ.ಗ ಹೂವಿನಹಡಗಲಿ ಶ್ರೀ ಮ.ನಿ.ಪ್ರ. ಹಿರೇಶಾಂತವೀರ ಮಹಾಸ್ವಾಮಿಗಳು, ಬೆಳ್ಳಟ್ಟಿ ರಾಮಲಿಂಗೇಶ್ವರ ದಾಸೋಹ ಮಠದ ಶ್ರೀ ಷ.ಬ್ರ. ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಾ
ವನೂರಿನ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ಸುಳೇಕಲ್ ಬೃಹನ್ಮಠದ ಶ್ರೀಶೀಶ್ರೀ ಭುವನೇಶ್ವರಯ್ಯ ತಾತನವರು, ಉಡುಮಕಲ್ ಹಿರೇಮಠದ ಶ್ರೀ ವೀರಬಸಯ್ಯ ಮಹಾಸ್ವಾಮಿಗಳು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನರೆಡ್ಡಿ , ಮಾಜಿ ವಿಧಾನ ಪರಿಷತ್ ಸದಸ್ಯರಾದ
ಹೆಚ್.ಆರ್. ಶ್ರೀನಾಥ್, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಪಾಲ್ಗೊಂಡಿದ್ದರು.
ಸಂಜೆ 5:00 ಗಂಟೆಗೆ ಸರಿಯಾಗಿ ಶ್ರೀ ಬೆಟ್ಟದೇಶ್ವರ ಹಾಗೂ ಶ್ರೀ ಲಿಂಗೇಶ್ವರರ ಜೋಡು ರಥೋತ್ಸವವು ಭಕ್ತರ ಸಮೂಹದಲ್ಲಿ ಅದ್ಧೂರಿಯಾಗಿ ಜರುಗಿತು.
ಅದೇರೀತಿ ಇಂದು ಸಾಯಂಕಾಲ ಕಡುಬಿನ ಕಾಳಗ ನಡೆಯಿತು. https://aratt.ai/@vishwaroopa_news_blog
