ಗಂಗಾವತಿ: 1000 ವರ್ಷದ ಹಿಂದಿನ ಮೂಲ ಸೋಮನಾಥ ಜ್ಯೋತಿರ್ಲಿಂಗವು ಮೊಘಲರ ಆಕ್ರಮಣದಿಂದ ಲುಕ್ತವಾಗಿದದ್ದು ಅದನ್ನು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಪುನರ್ ಪ್ರತಿಷ್ಠಾಪಿಸಿ ಸಾರ್ವಜನಿಕ ವೀಕ್ಷಣೆಗಾಗಿ ಇಡೀ ಕರ್ನಾಟಕದಾದ್ಯಂತ ಪ್ರತಿ ತಾಲೂಕಿಗೆ ಜ್ಯೋತಿರ್ಲಿಂಗವು ಆಗಮಿಸುತ್ತಿದೆ. ಅದರಂತೆ ನಾಳೆ ರವಿವಾರ ಮಾರ್ಚ್-15 ರಂದು ಬೆಳಗ್ಗೆ ಗಂಗಾವತಿಗೆ ಆಗಮಿಸಲಿದೆ ಎಂದು ಆರ್ಟ್ ಆಫ್ ಲಿವಿಂಗ್‌ನ ಗಂಗಾವತಿ ಮುಖ್ಯ ಸಂಚಾಲಕರಾದ ರಘುನಾಥ ರಘುನಾಥ ಪವಾರ್ ಪ್ರಕಟಣೆಯಲ್ಲಿ ತಿಳಿಸಿದರು.
ಸನಾತನ ಧರ್ಮದ ಪ್ರಕಾರ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ ಸೋಮನಾಥ ದೇವಾಲಯವನ್ನು ಸತ್ಯಯುಗದಲ್ಲಿ ಸೋಮ: ಅಂದರೆ ಚಂದ್ರನು ಪ್ರತಿಷ್ಠಾಪಿಸಿದನು ಮತ್ತು ಇಲ್ಲಿ ಶ್ರೀ ಕೃಷ್ಣನು ತಪಸ್ಸು ಮಾಡಿದ್ದನು ಎಂಬ ಪ್ರತೀತಿ ಇದೆ. ಈ ಮೂಲ ಜ್ಯೋತಿರ್ಲಿಂಗವು ಗಾಳಿಯಲ್ಲಿ ತೇಲುತ್ತಿತ್ತು ಎಂದು ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಈ ಶಿಲೆಯ ಕೇಂದ್ರ ಭಾಗವು ಅತ್ಯಂತ ಪ್ರಬಲವಾದ ಕಾಂತೀಯ ಶಕ್ತಿಯಿಂದ ಕೂಡಿದೆ. ಕ್ರಿ.ಶ 1026ರಲ್ಲಿ ಮೊಹಮ್ಮದ್ ಘಜನಿಯು ದೇವಾಲಯದ ಮೇಲೆ ಆಕ್ರಮಣ ಮಾಡಿ ಈ ಜ್ಯೋತಿರ್ಲಿಂಗವನ್ನು ಛಿದ್ರಗೊಳಿಸಿದನು. ಶಾಶ್ವತವಾಗಿ ನಷ್ಟವಾಗಿದೆ ಎಂದುಕೊಂಡಂತಹ ಈ ಶಿವಲಿಂಗದ ಭಾಗಗಳನ್ನು ಅಗ್ನಿಹೋತ್ರಿ ಪುರೋಹಿತರು ರಹಸ್ಯವಾಗಿ ತಮ್ಮ ಬಳಿ ಸಂರಕ್ಷಿಸಿದರು. ಅವರು ಈ ಚೂರುಗಳಿಗೆ ಶಿವಲಿಂಗದ ಆಕಾರವನ್ನು ನೀಡಿದರು ಮತ್ತು ಸುಮಾರು ಸಾವಿರ ವರ್ಷಗಳ ಕಾಲ ತಲೆ-ತಲಾಂತರದಿಂದ ಇದನ್ನು ಸಂರಕ್ಷಿಸಿಕೊಂಡು ಬಂದರು.
1924ರಲ್ಲಿ ಕಂಚಿ ಶಂಕರಾಚಾರ್ಯರು ಈ ಅಗ್ನಿಹೋತ್ರಿಗಳಿಗೆ ಈ ಶಿವಲಿಂಗಗಳನ್ನು ನೂರು ವರ್ಷಗಳ ಕಾಲ ಗುಪ್ತವಾಗಿ ಸಂರಕ್ಷಿಸುವಂತೆ ತಿಳಿಸಿದರು ಮತ್ತು ಅದನ್ನು ಗುರುದೇವರಿಗೆ ನೀಡುವಂತೆ ಸೂಚಿಸಿದ್ದರು. ಅದೇ ರೀತಿ ಜನವರಿ 2025 ರಲ್ಲಿ ಅಗ್ನಿಹೋತ್ರಿಗಳು ಈ ಶಿವಲಿಂಗಗಳನ್ನು ಗುರುದೇವರಿಗೆ ಹಸ್ತಾಂತರಿಸಿದರು. ಮಹಾಶಿವರಾತ್ರಿಯಂದು ಜ್ಯೋತಿರ್ಲಿಂಗದ ಈ ಭಾಗಗಳನ್ನು ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದಲ್ಲಿ, ಒಂದು ಸಾವಿರ ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಮತ್ತು ದರ್ಶನಕ್ಕೆ ಮುಕ್ತಗೊಳಿಸಲಾಯಿತು.
ಈ ಜ್ಯೋತಿರ್ಲಿಂಗವನ್ನು ಮಾರ್ಚ್-15 ರವಿವಾರ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆರವರೆಗೆ ಹಿರೇಜಂತಕಲ್ ಪ್ರಸನ್ನ ಪಂಪಾಪತಿ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಸಾಯಂಕಾಲ 4:30 ಇಂದ 7:00 ರ ವರೆಗೆ ಶ್ರೀ ಮಲ್ಲಿಕಾರ್ಜುನ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನೋಂದಣಿ ಮಾಡಿಕೊಂಡಂತ ಭಕ್ತರಿಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆವರೆಗೆ ಸಂಕಲ್ಪ ರುದ್ರಪೂಜೆ ಮಾಡಿಸಲಾಗುವುದು. ಕಾರಣ ಗಂಗಾವತಿ ನಗರದ ಹಾಗೂ ಸುತ್ತಮುತ್ತಲಿನ ಭಕ್ತರು ಈ ಮೂಲ ಜ್ಯೋತಿರ್ಲಿಂಗ ದರ್ಶನ ಪಡೆದುಕೊಂಡು ಪುನೀತರಾಗಬೇಕೆಂದು ವಿನಂತಿಸಿದ್ದಾರೆ. https://aratt.ai/@vishwaroopa_news_blog
