Local

ಭತ್ತದನಾಡು ಗಂಗಾವತಿಯಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌

ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ ಭರ್ಜರಿ ಸಾಧನೆ

ಗಂಗಾವತಿ: ಜುಲೈ-26 ರಂದು ಗಂಗಾವತಿಯ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಜಬಿವುಲ್ಲಾ ಅವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನ್ನು ಭವ್ಯವಾಗಿ ಆಯೋಜಿಸಲಾಯಿತು.

ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳು ಹಾಗೂ ರಾಜ್ಯಗಳ ಜೊತೆಗೆ ನೇಪಾಳ, ಭೂತಾನ್ ಮತ್ತು ಶ್ರೀಲಂಕಾ ದೇಶಗಳಿಂದ ಒಟ್ಟು 600ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಈ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ತಾಲೂಕಿನ ಪ್ರತಿಷ್ಠಿತ ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ 15 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಗೆದ್ದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಹರಣಿ – ಕಟಾ ಹಾಗೂ ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಪ್ರಣವಿ – ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಚಿನ್ನು – ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ವರ್ಷಿಕ್ ಗೌಡ – ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮೋಕ್ಷಿತ್ – ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಆರೋಣ್ಯ – ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಆದ್ವಿಕಾ – ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ದಿಲೀಪ್ – ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮಿಥುನ್ – ಕಟಾ ಹಾಗೂ ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕೀರ್ತಿ – ಕಟಾ ಹಾಗೂ ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಸಚಿನ್ – ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಅಂಬಿಕಾ – ಕಟಾ ಹಾಗೂ ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ವರುಣ್ – ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ಆಕಾಂಕ್ಷಾ – ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಅಗಸ್ತ್ಯ – ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ಧಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕರಾಟೆ ಶಿಕ್ಷಕರಾದ ಮಂಜುನಾಥ ರಾಠೋಡ್ ಅವರು, ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸವೇ ಈ ಸಾಧನೆಗೆ ಕಾರಣವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆಯ ಹೆಸರು ಬೆಳಗಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು.

ಈ ಸಾಧನೆಗೆ ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೊಲೀಸ್ ಪಾಟೀಲ್, ಕರಾಟೆ ಶಿಕ್ಷಕರಾದ ಮೀನಾಕ್ಷಿ ಹಾಗೂ ಫಯಾಜ್, ಕರಾಟೆ ವಿದ್ಯಾರ್ಥಿಗಳ ಪಾಲಕರಾದ ಗಾಂಧಿ, ಮಂಜುನಾಥ, ರಾಮಕೃಷ್ಣ, ಸೂರ್ಯಕುಮಾರಿ, ಸುಚಿತ್ರ, ಶುಭಲಕ್ಷ್ಮಿ, ಮಂಜುಳಾ ಸ್ವಪ್ನ, ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳನ್ನು ಕೋರಿದರು. https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading