ಸೆಪ್ಟೆಂಬರ್ 28, 2026

ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ಕೆರೆಹಳ್ಳಿಯಲ್ಲಿ ಜಾಗೃತಿ ಜಾಥಾ

ಗಂಗಾವತಿ: ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ 16ನೇ ದಿನದ ಅಂಗವಾಗಿ ಕೆರೆಹಳ್ಳಿ ಗ್ರಾಮದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ರೈತ ಬಾಂಧವರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.

ಡಾ. ಎಂ.ವಿ. ರವಿ, ಡಾ. ವಾಸುದೇವ ನಾಯಕ್, ಡಾ. ಶ್ವೇತಾ ಹಾಗೂ ಡಾ. ಸಾಹೇಬಗೌಡ ಅವರ ಮಾರ್ಗದರ್ಶನದಲ್ಲಿ ಕೆರೆಹಳ್ಳಿ ಗ್ರಾಮದ ದ್ಯಾಮವ್ವ ದೇವಸ್ಥಾನದ ಆವರಣದಲ್ಲಿ ರೈತರನ್ನು ಒಗ್ಗೂಡಿಸಿ ಮಣ್ಣು ಮತ್ತು ನೀರು ಸಂರಕ್ಷಣೆಯ ಮಹತ್ವ, ಉದ್ದೇಶ ಹಾಗೂ ವಿವಿಧ ಸಂರಕ್ಷಣಾ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.

ಈ ವೇಳೆ ಸಮತಟ್ಟು ಬೇಸಾಯ, ಪಟ್ಟೆ ಬೇಸಾಯ, ಮಲ್ಚಿಂಗ್, ಮಾಗಿ ಉಳುಮೆ, ಮಳೆನೀರು ಸಂಗ್ರಹಣೆ, ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಸೇರಿದಂತೆ ವಿವಿಧ ಮಣ್ಣು ಮತ್ತು ನೀರು ಸಂರಕ್ಷಣಾ ವಿಧಾನಗಳ ಕುರಿತು ರೈತರಿಗೆ ವಿವರಿಸಲಾಯಿತು.

ಈ ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದು, ಮಣ್ಣಿನ ಸವಕಳಿಯನ್ನು ತಡೆಗಟ್ಟಬಹುದು ಹಾಗೂ ನೀರನ್ನು ಸಮರ್ಪಕವಾಗಿ ಸಂರಕ್ಷಿಸಬಹುದು. ಅಲ್ಲದೆ, ನೀರಿನ ಅಭಾವವನ್ನು ಕಡಿಮೆ ಮಾಡುವ ಮೂಲಕ ಕೃಷಿ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಲಾಯಿತು.

ನಂತರ ಜಾಥಾವು ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಿ ಮನೆ-ಮನೆಗೆ ತೆರಳಿ ಮಣ್ಣು ಮತ್ತು ನೀರು ಸಂರಕ್ಷಣೆಯ ಕುರಿತು ಸಾರ್ವಜನಿಕರು ಹಾಗೂ ರೈತ ಬಾಂಧವರಲ್ಲಿ ಜಾಗೃತಿ ಮೂಡಿಸಿತು.

ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಮಣ್ಣು ಮತ್ತು ನೀರು ನಮ್ಮ ಅಮೂಲ್ಯ ಸಂಪತ್ತು ಎಂಬ ಸಂದೇಶವನ್ನು ಜನರಿಗೆ ತಲುಪಿಸಿದರು.  https://aratt.ai/@vishwaroopa_news_blog

Leave a Reply

Optimized by Optimole

Discover more from VISHWAROOPA NEWS BLOG

Subscribe now to keep reading and get access to the full archive.

Continue reading