ಸೆಪ್ಟೆಂಬರ್ 28, 2026

ಗಂಗಾವತಿ: ಶ್ರೀ ಭಗೀರಥ ಉಪ್ಪಾರ್ ಸಮಾಜದ ಹಿಂದುಳಿದ ವರ್ಗದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದಕ್ಕೆ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಪಕ್ಷಾತೀತವಾಗಿ ರಾಜ್ಯ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಸಮಾಜದ ಅಧ್ಯಕ್ಷ ಅಮರಜ್ಯೋತಿ ವೆಂಕಟೇಶ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗದ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆತಿರುವುದು ಸಮಾಜಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಿರ್ಧಾರದಿಂದ ಸಮುದಾಯದ ಅಭಿವೃದ್ಧಿಗೆ ಹೊಸ ಅವಕಾಶಗಳು ದೊರೆಯಲಿದ್ದು, ಸಚಿವ ಪುಟ್ಟರಂಗಶೆಟ್ಟಿ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯ ಹಾಗೂ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ನಿರ್ಧಾರವನ್ನು ಭಗೀರಥ ಉಪ್ಪಾರ ಸಮಾಜ ಸ್ವಾಗತಿಸುತ್ತಿದ್ದು, ಸಚಿವ ಪುಟ್ಟರಂಗಶೆಟ್ಟಿ ಅವರ ಮೂಲಕ ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಲಿ ಎಂದು ಆಶಿಸುತ್ತೇವೆ ಎಂದು ಅಮರಜ್ಯೋತಿ ವೆಂಕಟೇಶ್ ತಿಳಿಸಿದ್ದಾರೆ.  https://aratt.ai/@vishwaroopa_news_blog

Leave a Reply

Optimized by Optimole

Discover more from VISHWAROOPA NEWS BLOG

Subscribe now to keep reading and get access to the full archive.

Continue reading