ಸೆಪ್ಟೆಂಬರ್ 28, 2026

ಮುದ್ದಾಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಸಸಿ ನೆಟ್ಟರು.

ಮುದ್ದಾಬಳ್ಳಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಗಂಗಾವತಿ: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳು

ಕೊಪ್ಪಳ ಜಿಲ್ಲೆಯ ಮುದ್ದಾಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಸಿ ನೆಟ್ಟ ದೃಶ್ಯ
ಮುದ್ದಾಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಸಸಿ ನೆಟ್ಟರು.

ಮತ್ತು ಗ್ರಾಮಸ್ಥರಿಗೆ ತಿಳಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯ ಮುದ್ದಾಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಅಲ್ಫಾ ಹೆಲ್ತ್ ಎಜುಕೇಶನ್ ಅಂಡ್ ರೂರಲ್ ಡೆವಲಪ್‌ಮೆಂಟ್‌ ಫೌಂಡೇಶನ್ (ರಿ), ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘಟನೆ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದಈ  ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಶರಣಗೌಡ ಮಾಲಿಪಾಟೀಲ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡರು.

ಪರಿಸರ ಸಂರಕ್ಷಣೆ ವನಮಹೋತ್ಸವದ ಮುಖ್ಯ ಉದ್ದೇಶ

ಕಾರ್ಯಕ್ರಮದ ಪ್ರಾಸ್ತಾವಿಕ ಮಾತುಗಳಲ್ಲಿ ಸಲ್ಮಾ ಜಾನ್ ಅವರು ಮಾತನಾಡಿ, ವನಮಹೋತ್ಸವ ಎಂದರೆ ಕೇವಲ ಸಸಿಗಳನ್ನು ನೆಡುವ ಕಾರ್ಯಕ್ರಮವಲ್ಲ. ಪರಿಸರ ಸಂರಕ್ಷಣೆ, ಶುದ್ಧ ಗಾಳಿ, ಹಸಿರು ಪರಿಸರ ಹಾಗೂ ಮರಗಳ ಮಹತ್ವವನ್ನು ಮಕ್ಕಳಲ್ಲಿ ಮತ್ತು ಗ್ರಾಮಸ್ಥರಲ್ಲಿ ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ, ಈ ಉದ್ದೇಶವನ್ನು ಮಕ್ಕಳು ಹಾಗೂ ಗ್ರಾಮಸ್ಥರು ಇಟ್ಟುಕೊಂಡು ಪರಿಸರದ ಸ್ವಚ್ಛತೆ ಹಾಗೂ ಪರಿಸರದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಎಲ್ಲ ಸಮುದಾಯದವರು ಒಗ್ಗೂಡಿ ಸಸಿಗಳನ್ನು ನೆಟ್ಟು, ಅವುಗಳ ಪೋಷಣೆ ಮತ್ತು ಸಂರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಪರಿಸರ ಕಾಳಜಿಯ ಜೊತೆಗೆ ಸಾಮಾಜಿಕ ಏಕತೆಯ ಸಂದೇಶವೂ ಬಲವಾಗುತ್ತದೆ ಎಂದು ಅವರು ತಿಳಿಸಿದರು.

ಯುವಜನರು, ಮಕ್ಕಳು ಪರಿಸರ ಕಾಳಜಿ ವಹಿಸಬೇಕು

ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಖಾಸಿಂ ಅಲಿ ಮುದ್ದಾಬಳ್ಳಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಯುವಜನರು ಹಾಗೂ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು, ಅವುಗಳನ್ನು ಬೆಳೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಕೇವಲ ಸಸಿ ನೆಡುವುದಕ್ಕೆ ಸೀಮಿತವಾಗದೆ, ನೆಟ್ಟ ಸಸಿಗಳಿಗೆ ನಿರಂತರವಾಗಿ ನೀರುಣಿಸಿ ಅವುಗಳ ಸಂರಕ್ಷಣೆ ಮಾಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಾಲಾ ಮಕ್ಕಳಿಗೆ ಶೂ ವಿತರಣೆ

ಶಾಲೆಯ ಮುಖ್ಯೋಪಾಧ್ಯಾಯ ಡಾ. ಶಂಕ್ರಪ್ಪ ಬಿನ್ನಾಳ್ ಅವರು ಪರಿಸರದ ಮಹತ್ವ ಹಾಗೂ ಮರಗಳ ಸಂರಕ್ಷಣೆಯ ಅಗತ್ಯದ ಕುರಿತು ಮಾತನಾಡಿದರು. ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಹಾಗೂ ಪರಿಸರ ಉಳಿಸಿ ಬೆಳೆಸಲು ಪಣ ತೊಂಡಬೇಕೆಂದು ಮಕ್ಕಳಿಗೆ  ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವನಮಹೋತ್ಸವದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಶೂಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೈತ ಸಂಘದ ಅಧ್ಯಕ್ಷ ವೆಂಕರೆಡ್ಡಿ ಚುಕ್ಕನಕಲ್, ಎಸ್‌ಡಿಎಂಸಿ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಹಾಲವರ್ತಿ, ಮಹೇಶ್ ಹಡಪದ, ಮಾರುತಿ ಹಾಲವರ್ತಿ ಸೇರಿದಂತೆ ಶಾಲೆಯ ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಮುದ್ದಾಬಳ್ಳಿ ಗ್ರಾಮದ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.

ಮುದ್ದಾಬಳ್ಳಿ ಶಾಲೆಯಲ್ಲಿ ನಡೆದ ಈ ವನಮಹೋತ್ಸವ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವುದರ ಜೊತೆಗೆ, ಮಕ್ಕಳಲ್ಲಿ ಮರ-ಗಿಡಗಳ ಬಗ್ಗೆ ಕಾಳಜಿ ಬೆಳೆಸುವ ಮತ್ತು ಗ್ರಾಮಸ್ಥರಲ್ಲಿ ಹಸಿರು ಪರಿಸರದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನವಾಗಿ ಗಮನ ಸೆಳೆಯಿತು.

https://aratt.ai/@vishwaroopa_news_blog

Leave a Reply

Optimized by Optimole

Discover more from VISHWAROOPA NEWS BLOG

Subscribe now to keep reading and get access to the full archive.

Continue reading