ಗಣರಾಜ್ಯೋತ್ಸವ ಅಂಗವಾಗಿ ಹಾಸನದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಕರ ಮನ ಸೆಳೆಯಿತು.
ಶಾಲೆಯ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಗಳ ಮೂಲಕ ತಾವೇ ತಯಾರಿಸಿದ ತಮ್ಮ ತಮ್ಮ ವಿವಿಧ ಮಾದರಿಗಳ ಬಗ್ಗೆ ವಿವರಣೆ ನೀಡಿದ್ದು ಗಮನಾರ್ಹವಾಗಿತ್ತು.
ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಈ ರೀತಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಇದು ಸಹಕಾರಿ. ಪ್ರಪಂಚದ ಜ್ಞಾನ ತಿಳುವಳಿಕೆ ಹೆಚ್ಚುವುದು. ಬಾಲ್ಯದಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವ ಪ್ರಯತ್ನ ಇದಾಗಿದೆ ಅಲ್ಲದೇ ಪ್ಲಾನಟೇರಿಯಂ (ಬಾಹ್ಯಾಕಾಶ ತಾರಾಲಯ) ಮೊಟ್ಟ ಮೊದಲ ಬಾರಿಗೆ ನಮ್ಮ ಶಾಲೆಯಲ್ಲಿ ಏರ್ಪಡಿಸಿದ್ದು ಇದು ವಿದ್ಯಾರ್ಥಿಗಳು ವಿಜ್ಞಾನ, ಎಂಜಿನಿಯರಿಂಗ್ ತಂತ್ರಜ್ಞಾನ ಕುರಿತು ಉಪಯುಕ್ತವಾಗಿದೆ ಎಂದರು.
ಕನ್ನಡ ವಿಭಾಗದಲ್ಲಿ ಹಾಸನ ಜಿಲ್ಲೆಯ ಹೆಮ್ಮೆಯ ಸಾಹಿತಿಗಳು ಶೀರ್ಷಿಕೆ ಪೋಟೋಗಳ ಭಾನು ಮುಷ್ತಾಕ್, ಗೊರೂರು ಅನಂತರಾಜು, ಶೈಲಜ ಹಾಸನ, ಟಿ.ಹೆಚ್. ಅಪ್ಪಾಜಿಗೌಡರು, ಪತ್ರಕರ್ತೆ ಲೀಲಾವತಿ ಇದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸಂಸ್ಥೆ ವತಿಯಿಂದ ಸಾಹಿತಿ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರು ಪ್ರಸನ್ನಕುಮಾರ್, ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಇದ್ದರು.