
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್
ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…