ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ
ಹಾಸನ: ನವೆಂಬರ್-1 ರಂದು ಹಾಸನದ ಹಳೆ ಈದ್ಗಾ ಮೈದಾನ, ಹೊಸ ಲೈನ್ ರಸ್ತೆಯಲ್ಲಿರುವ “ಶಾಹೀನ್ ಲರ್ನ್ ಅಕಾಡೆಮಿ ಶಾಲೆ” ಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸಾಹಿತಿ, ಶಿಕ್ಷಕಿ,ಸಾಮಾಜಿಕ ಚಿಂತಕಿ, ಪತ್ರಕರ್ತೆ ಹಾಗೂ ಸಂಸ್ಥಾಪಕ ಅಧ್ಯಕ್ಷರು, ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಆಹ್ವಾನಿಸಿ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರನ್ನಾಗಿ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಡಲಾಗಿತ್ತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕನ್ನಡವನ್ನು ಉಳಿಸುವುದೇ…
