ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ
ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ಸುಂದರೇಶ ಡಿ ಉಡುವಾರೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾಕುಂಚ ವಿಭಿನ್ನ ಕಾರ್ಯಕ್ರಮಗಳನ್ನು ಹಾಗೂ…
