ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…