
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್
ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…